ಬುಧವಾರ, ಜೂನ್ 10, 2009

ಜ್ಞಾನಪೀಠ ಪ್ರಶಸ್ತಿ

ಕುವೆಂಪು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು. ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು. ಇವರ ವಿಶ್ವಮಾನವ ಸಂದೇಶ ಅತಿ ಪ್ರಸಿದ್ಡವಾಗಿದೆ. ಕೃತಿಗಳು ಕಾದಂಬರಿ: ಕಾನೂರು ಸುಬ್ಬಮ್ಮ ಹೆಗ್ಗಡತಿ (ಚಲನ ಚಿತ್ರವಾಗಿದೆ) ಮಲೆಗಳಲ್ಲಿ ಮದುಮಗಳು (ಚಲನ ಚಿತ್ರವಾಗಿದೆ) ಆತಕಗಲು: ಬೆರಳ್ಗೆ ಕೊರಳ್ , ಶೂದ್ರ ತಪಸ್ವಿ , ಸ್ಮಶಾನ ಕುರುಕ್ಷೇತ್ರ, ರಕ್ತಾಕ್ಷಿ, ಚಿತ್ರ ಪ್ರಬಂಧ. ಮಲೆನಾಡಿನ ಚಿತ್ರಗಳು ವಿಚಾರ: ವಿಚಾರ ಕ್ರಾಂತಿಗೆ ಆಹ್ವಾನ ಆತ್ಮ ಚರಿತ್ರೆ: ನೆನಪಿನ ದೋಣಿಯಲ್ಲಿ, ಕಾವ್ಯಗಳು: ಶ್ರೀ ರಾಮಾಯಣ ದರ್ಶನ೦, ಕೊಳಲು, ಅಗ್ನಿಹಂಸ, ಅನಿಕೇತನ, ಅನುತ್ತರಾ, ಇಕ್ಶುಗಂಗೋತ್ರಿ ಕದರಡಕೆ, ಕಥನ ಕವನಗಳು: ಕಲಾಸುಂದರಿ, ಕಿಂಕಿಣಿ, ಕೃತ್ತಿಕೆ, ಜೇನಾಗುವ, ನವಿಲು, ಪಕ್ಷಿಕಾಶಿ, ಚಿತ್ರಾಂಗದಾ,ಪ್ರೇತಕ್ಯು ಪ್ರೇಮಕಾಶ್ಮೀರ, ಮಂತ್ರಾಕ್ಷತೆ, ಷೋಡಶಿ, ಹಾಳೂರು, ಕೋಗಿಲೆ, ಪಾಂಚಜನ್ಯ, ಕುಟೀಚಕ ಪ್ರಶಸ್ತಿ ಪುರಸ್ಕಾರಗಳು ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ), ಪದ್ಮಭೂಷಣ, ಪದ್ಮವಿಭೂಷಣ, ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ರಾಷ್ಟ್ರಕವಿ ಎಂದು ಬಿರುದು ದ.ರಾ.ಬೇಂದ್ರೆ ಶ್ರೀ ದತ್ತಾತ್ರೇಯ ರಾಮಚಂದ್ರ ಬೇಂದ್ರೆ"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು. ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು. ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು. ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ. ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ ಬೇಂದ್ರೆಯವರ ಸಾಹಿತ್ಯ ಕಾವ್ಯಸಂಕಲನ: ೧೯೨೨: ಕೃಷ್ಣಾಕುಮಾರಿ; ೧೯೩೨: ಗರಿ; ೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ; ೧೯೩೭: ಸಖೀಗೀತ; ೧೯೩೮: ಉಯ್ಯಾಲೆ; ೧೯೩೮: ನಾದಲೀಲೆ; ೧೯೪೩: ಮೇಘದೂತ; ೧೯೪೬: ಹಾಡು ಪಾಡು; ೧೯೫೧: ಗಂಗಾವತರಣ; ೧೯೫೬: ಸೂರ್ಯಪಾನ; ೧೯೫೬: ಹೃದಯಸಮುದ್ರ; ೧೯೫೬: ಮುಕ್ತಕಂಠ; ೧೯೫೭: ಚೈತ್ಯಾಲಯ; ೧೯೫೭: ಜೀವಲಹರಿ; ೧೯೫೭: ಅರಳು ಮರಳು; ೧೯೫೮: ನಮನ; ೧೯೫೯: ಸಂಚಯ; ೧೯೬೦: ಉತ್ತರಾಯಣ; ೧೯೬೧: ಮುಗಿಲಮಲ್ಲಿಗೆ; ೧೯೬೨: ಯಕ್ಷ ಯಕ್ಷಿ; ೧೯೬೪: ನಾಕುತಂತಿ; ೧೯೬೬: ಮರ್ಯಾದೆ; ೧೯೬೮: ಶ್ರೀಮಾತಾ; ೧೯೬೯: ಬಾ ಹತ್ತರ; ೧೯೭೦: ಇದು ನಭೋವಾಣಿ; ೧೯೭೨: ವಿನಯ; ೧೯೭೩: ಮತ್ತೆ ಶ್ರಾವಣಾ ಬಂತು; ೧೯೭೭: ಒಲವೇ ನಮ್ಮ ಬದುಕು; ೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು; ೧೯೮೨: ಪರಾಕಿ; ೧೯೮೨: ಕಾವ್ಯವೈಖರಿ; ೧೯೮೩: ತಾ ಲೆಕ್ಕಣಕಿ ತಾ ದೌತಿ; ೧೯೮೩: ಬಾಲಬೋಧೆ; ೧೯೮೬: ಚೈತನ್ಯದ ಪೂಜೆ; ೧೯೮೭: ಪ್ರತಿಬಿಂಬಗಳು; ವಿಮರ್ಶೆ ೧೯೩೭: ಸಾಹಿತ್ಯ ಮತ್ತು ವಿಮರ್ಶೆ;೧೯೪೦: ಸಾಹಿತ್ಯಸಂಶೋಧನೆ;೧೯೪೫: ವಿಚಾರ ಮಂಜರಿ; ೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;೧೯೫೯: ಮಹಾರಾಷ್ಟ್ರ ಸಾಹಿತ್ಯ; ೧೯೬೨: ಕಾವ್ಯೋದ್ಯೋಗ;೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು; ೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;೧೯೭೬: ಕುಮಾರವ್ಯಾಸ ಪುಸ್ತಿಕೆ; ಸಣ್ಣ ಕಥೆ ೧೯೪೦: ನಿರಾಭರಣ ಸುಂದರಿ; ನಾಟಕಗಳು ದೆವ್ವದ ಮನೆ; ಹಳೆಯ ಗೆಣೆಯರು; ಸಾಯೊ ಆಟ; ತಿರುಕರ ಪಿಡುಗು;ಗೋಲ್; ಉದ್ಧಾರ;ಜಾತ್ರೆ; ನಗೆಯ ಹೊಗೆ; ಮಂದೀ ಮದಿವಿ; ಮಂದೀ ಮಕ್ಕಳು;ಮಂದೀ ಮನಿ; ಆ ಥರಾ ಈ ಥರಾ; ಶೋಭನಾ; ಮಕ್ಕಳು ಅಡಿಗೆ ಮನೆ ಹೊಕ್ಕರೆ; ಅನುವಾದ ಉಪನಿಷತ್ ರಹಸ್ಯ( ಮೂಲ: ಶ್ರೀ ರಾನಡೆ[[1]]); ಭಾರತೀಯ ನವಜನ್ಮ(ಮೂಲ:ಶ್ರೀ ಅರವಿಂದ[[2]] ); ಶ್ರೀ ಅರವಿಂದರ ಯೋಗ, ಆಶ್ರಮ ಮತ್ತು ತತ್ವೊಪದೇಶ;ಚೀನಾದ ಬಾಳು ಬದುಕು; ಗುರು ಗೋವಿಂದಸಿಂಗ; ನೂರೊಂದು ಕವನ( ಮೂಲ: ಶ್ರೀ ರವೀಂದ್ರನಾಥ ಠಾಕೂರ); ಕಬೀರ ವಚನಾವಲಿ; ಭಗ್ನಮೂರ್ತಿ(ಮೂಲ ಮರಾಠಿ: ಶ್ರೀ ಅ.ರಾ.ದೇಶಪಾಂಡೆ); ಮರಾಠಿ ಕೃತಿಗಳು ಸಂವಾದ;ವಿಠ್ಠಲ ಸಂಪ್ರದಾಯ; ಶಾಂತಲಾ( ಕನ್ನಡದಿಂದ ಅನುವಾದ:ಮೂಲ:ಕೆ.ವಿ.ಅಯ್ಯರ್); ಸಂತ, ಮಹಂತ,ಪೂರ್ಣ ಶಂಭೂ ವಿಠ್ಠಲ; ವಿಠ್ಠಲ ಪಾಂಡುರಂಗ (ಕವನ ಸಂಗ್ರಹ); ಪ್ರಶಸ್ತಿಗಳು ದ.ರಾ.ಬೇಂದ್ರೆಯವರುಅವರಿಗೆ ಸಂದ ಗೌರವಗಳು ಹಲವು. ಡಾಕ್ಟರೇಟ್ ಪದವಿ, ಕೇಳ್ಕರ್ ಬಹುಮಾನ (೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ "ಸಂವಾದ" ಎಂಬ ಕೃತಿಗೆ), ಅವರ "ಅರಳು ಮರಳು" ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ (೧೯೫೮ರಲ್ಲಿ), ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿ, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ -ಮೊದಲಾದ ಅನೇಕ ಗೌರವಗಳು ಅವರಿಗೆ ಲಭಿಸಿದವು. ೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರನ್ನು ಗೌರವಿಸಲಾಯಿತು. ಅದೇ ವರ್ಷ ಅವರ ನಾಕುತಂತಿ ಕವನ ಸಂಕಲನವು ಪ್ರಕಾಶಿಸಲ್ಪಟ್ಟಿತು.೧೯೭೩ರಲ್ಲಿ ಬೇಂದ್ರೆಯವರ ನಾಕುತಂತಿ ಕವನ ಸಂಗ್ರಹವನ್ನು ಜ್ಞಾನಪೀಠ ಪ್ರಶಸ್ತಿಗಾಗಿ ಆರಿಸಿತು. ಅದೇ ವರ್ಷ ಒರಿಯಾ ಭಾಷೆಯ ಲೇಖಕ ಗೋಪಿನಾಥ ಮೊಹಂತಿ ಅವರೂ ಈ ಗೌರವಕ್ಕೆ ಅರ್ಹರಾದರು. ಆ ವರ್ಷದ ಪ್ರಶಸ್ತಿ ಮೌಲ್ಯವನ್ನು ಇಬ್ಬರಿಗೂ ಹಂಚಲಾಯಿತು. ಶಿವರಾಮ ಕಾರಂತ ಕೋಟ ಶಿವರಾಮ ಕಾರಂತಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨ - ಸೆಪ್ಟೆಂಬರ್ ೧೨ ೧೯೯೭) - "ಕಡಲತೀರದ ಭಾರ್ಗವ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ. ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿ ಬಾಳಿ, ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮ ಕಾರಂತರು ಸೆಪ್ಟೆಂಬರ್ ೧೨ ೧೯೯೭ರಂದು ನಿಧನ ಹೊಂದಿದರು. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ಸಾವಿನ ಹಿಂದಿನ ನಾಲ್ಕಾರು ದಿನಗಳವರೆಗೂ ಪ್ರವಾಸ ಮಾಡಿದ್ದರು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ "ಕಾರಂತಜ್ಜ" ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು. ಕೃತಿಗಳು ಕವನ: ರಾಷ್ಟ್ರಗೀತ ಸುಧಾಕರ, ಸೀಳ್ಗವನಗಳು ಕಾದಂಬರಿ: ಅದೇ ಊರು, ಅದೆ ಮರ,ಅಳಿದ ಮೇಲೆ,ಅಂಟಿದ ಅಪರಂಜಿ,ಆಳ, ನಿರಾಳ,ಇದ್ದರೂ ಚಿಂತೆ, ಇನ್ನೊಂದೇ ದಾರಿ, ಇಳೆಯೆಂಬ, ಉಕ್ಕಿದ ನೊರೆ, ಒಡ ಹುಟ್ಟಿದವರು, ಒಂಟಿ ದನಿ,ಔದಾರ್ಯದ ಉರುಳಲ್ಲಿ, ಕಣ್ಣಿದ್ದೂ ಕಾಣರು, ಕನ್ನಡಿಯಲ್ಲಿ ಕಂಡಾತ, ಕನ್ಯಾಬಲಿ, ಕರುಳಿನ ಕರೆ, ಕುಡಿಯರ ಕೂಸು, ಕೇವಲ ಮನುಷ್ಯರು, ಗೆದ್ದ ದೊಡ್ಡಸ್ತಿಕೆ, ಗೊಂಡಾರಣ್ಯ, ಚಿಗುರಿದ ಕನಸು, ಚೋಮನ ದುಡಿ, ಜಗದೋದ್ಧಾರ ನಾ, ಜಾರುವ ದಾರಿಯಲ್ಲಿ,ದೇವದೂತರು, ಧರ್ಮರಾಯನ ಸಂಸಾರ, ನಷ್ಟ ದಿಗ್ಗಜಗಳು, ನಂಬಿದವರ ನಾಕ, ನರಕ, ನಾವು ಕಟ್ಟಿದ ಸ್ವರ್ಗ, ನಿರ್ಭಾಗ್ಯ ಜನ್ಮ, ಬತ್ತದ ತೊರೆ,ಬೆಟ್ಟದ ಜೀವ, ಭೂತ, ಮರಳಿ ಮಣ್ಣಿಗೆ,ಮುಗಿದ ಯುದ್ಧ, ಮೂಕಜ್ಜಿಯ ಕನಸುಗಳು, ಮೂಜನ್ಮ, ಮೈ ಮನಗಳ ಸುಳಿಯಲ್ಲಿ, ಮೊಗ ಪಡೆದ ಮನ, ವಿಚಿತ್ರ ಕೂಟ, ಶನೀಶ್ವರನ ನೆರಳಿನಲ್ಲಿ,ಸನ್ಯಾಸಿಯ ಬದುಕು, ಸಮೀಕ್ಷೆ, ಸರಸಮ್ಮನ ಸಮಾಧಿ,ಸ್ವಪ್ನದ ಹೊಳೆ,ಹೆತ್ತಳಾ ತಾಯಿ, ನಾಟಕ:ಅವಳಿ ನಾಟಕಗಳು, ಏಕಾಂಕ ನಾಟಕಗಳು,ಐದು ನಾಟಕಗಳು, ಕಟ್ಟೆ ಪುರಾಣ,ಕಠಾರಿ ಭೈರವ, ಕರ್ಣಾರ್ಜುನ, ಕೀಚಕ ಸೈರಂಧ್ರಿ,ಗರ್ಭಗುಡಿ, ಗೀತ ನಾಟಕಗಳು, ಜಂಬದ ಜಾನಕಿ, ಜ್ಯೂಲಿಯಸ್ ಸೀಸರ್, ಡುಮಿಂಗೊ,ದೃಷ್ಟಿ ಸಂಗಮ, ನವೀನ ನಾಟಕಗಳು, ನಾರದ ಗರ್ವಭಂಗ, ಬಿತ್ತಿದ ಬೆಳೆ, ಬೆವರಿಗೆ ಜಯವಾಗಲಿ, ಬೌದ್ಧ ಯಾತ್ರಾ, ಮಂಗಳಾರತಿ, ಮುಕ್ತದ್ವಾರ, ಯಾರೊ ಅಂದರು, ವಿಜಯ, ವಿಜಯ ದಶಮಿ, ಸರಳ ವಿರಳ ನಾಟಕಗಳು, ಸಾವಿರ ಮಿಲಿಯ, ಹಣೆ ಬರಹ, ಹಿರಿಯಕ್ಕನ ಚಾಳಿ,ಹೇಗಾದರೇನು?, ಹೇಮಂತ , ಸಣ್ಣ ಕತೆ: ಕವಿಕರ್ಮ, ತೆರೆಯ ಮರೆಯಲ್ಲಿ, ಹಸಿವು, ಹಾವು, ಹರಟೆ, ವಿಡಂಬನೆ: ಗ್ನಾನ,ಚಿಕ್ಕ ದೊಡ್ಡವರು, ದೇಹಜ್ಯೋತಿಗಳು ಮತ್ತು ಪ್ರಾಣಿ ಪ್ರಬಂಧಗಳು, ಮೈಗಳ್ಳನ ದಿನಚರಿಯಿಂದ, ಮೈಲಿಕಲ್ಲಿನೊಡನೆ ಮಾತುಕತೆಗಳು, ಹಳ್ಳಿಯ ಹತ್ತು ಸಮಸ್ತರು, ಪ್ರವಾಸ ಕಥನ: ಅಪೂರ್ವ ಪಶ್ಚಿಮ, ಅರಸಿಕರಲ್ಲ, ಅಬೂವಿನಿಂದ ಬರಾಮಕ್ಕೆ ,ಪಾತಾಳಕ್ಕೆ ಪಯಣ, ಪೂರ್ವದಿಂದ ಅತ್ಯಪೂರ್ವಕ್ಕೆ,ಯಕ್ಷರಂಗಕ್ಕಾಗಿ ಪ್ರವಾಸ ಆತ್ಮಕಥನ: ಸ್ಮೃತಿಪಟಲದಿಂದ (೧,೨,೩), ಹುಚ್ಚು ಮನಸ್ಸಿನ ಹತ್ತು ಮುಖಗಳು , ಕಲಾಪ್ರಬಂಧ: ಕಲೆಯ ದರ್ಶನ, ಕರ್ನಾಟಕದಲ್ಲಿ ಚಿತ್ರಕಲೆ, ಚಾಲುಕ್ಯ ವಾಸ್ತು ಮತ್ತು ಶಿಲ್ಪ , ಚಿತ್ರಶಿಲ್ಪ,ವಾಸ್ತು ಕಲೆಗಳು, ಜಾನಪದ ಗೀತೆಗಳು, ಭಾರತೀಯ ಚಿತ್ರಕಲೆ,ಭಾರತೇಯ ಶಿಲ್ಪ, ಯಕ್ಷಗಾನ ಬಯಲಾಟ ,ಸೌಂದರ್ಯ ಪ್ರಜ್ಞೆಯನ್ನು ಬೆಳೆಯಿಸಲು, ವೈಜ್ಞಾನಿಕ: ಅದ್ಭುತ ಜಗತ್ತು(೧. ವಿಚಿತ್ರ ಖಗೋಲ,೨. ನಮ್ಮ ಭೂಖಂಡಗಳು), ಉಷ್ಣವಲಯದ ಆಗ್ನೇಸ್ಯ, ಪ್ರಾಣಿಪ್ರಪಂಚದ ವಿಸ್ಮಯಗಳು, ಮಂಗನ ಕಾಯಿಲೆ,ವಿಜ್ಞಾನ ಮತ್ತು ಅಂಧಶೃದ್ಧೆ, ವಿಶಾಲ ಸಾಗರಗಳು, ಹಿರಿಯ ಕಿರಿಯ ಹಕ್ಕಿಗಳು, ಇತರ: ಪ್ರಜಾಪ್ರಭುತ್ವವನ್ನು ಕುರಿತು,ಬಾಳ್ವೆಯೇ ಬೆಳಕು, ಬಾಳ್ವೆಯೇ ಬೆಳಕು ಅಥವಾ ಜೀವನ ಧರ್ಮ, ಮನೋದೇಹಿಯಾದ ಮಾನವ, ವಿಚಾರಶೀಲತೆ, ವಿಚಾರ ಸಾಹಿತ್ಯ ನಿರ್ಮಾಣ,ಸ್ವಾರ್ಥಿ ಮಾನವ, ಸಂಪಾದನೆ: ಐರೋಡಿ ಶಿವರಾಮಯ್ಯ ಬದುಕು, ಬರಹ, ಕೌಶಿಕ ರಾಮಾಯಣ,ಪಂಜೆಯವರ ನೆನಪಿಗಾಗಿ, ವಿಶ್ವಕೋಶ,ಕಲಾ ಪ್ರಪಂಚ, ಪ್ರಾಣಿ ಪ್ರಪಂಚ, ಬಾಲ ಪ್ರಪಂಚ (೧,೨,೩) ,ವಿಜ್ಞಾನ ಪ್ರಪಂಚ (೧,೨,೩,೪) , ನಿಘಂಟು: ಸಿರಿಗನ್ನಡ ಅರ್ಥಕೋಶ ಅನುವಾದ: ಕೀಟನಾಶಕಗಳ ಪಿಡುಗುಗಳು, ಕೋಟ ಮಹಾಜಗತ್ತು, ಜನತೆಯೂ ಅರಣ್ಯಗಳೂ , ನಮ್ಮ ಪರಮಾಣು ಚೈತನ್ಯ—ಉತ್ಪಾದನಾ ಸಾಧನಗಳು ,ನಮ್ಮ ಶಿಕ್ಷಣ ಪದ್ಧತಿಯ ಸಮಸ್ಯೆಗಳೂ, ಭವಿಷ್ಯವೂ, ನಮ್ಮ ಸುತ್ತಲಿನ ಕಡಲು, ನಮ್ಮೆಲ್ಲರಿಗೂ ಒಂದೇ ಭವಿಷ್ಯ,ಪರಮಾಣು – ಇಂದು ನಾಳೆ, ಪಂಚ ಋತು,ಬೆಳೆಯುತ್ತಿರುವ ಸಮಸ್ಯೆ ,ಭಾರತದ ಪರಿಸರ – ದ್ವಿತೀಯ ಸಮಿಕ್ಷೆ , ಭಾರತದ ಪರಿಸರದ ಪರಿಸ್ಥಿತಿ – ೧೯೮೨ – ಪ್ರಜೆಯ ದೃಷ್ಟಿಯಲ್ಲಿ, ಭಾರತ ವರ್ಷದಲ್ಲಿ ಬ್ರಿಟಿಷರು, ಯಾರು ಲಕ್ಷಿಸುವರು?,ಶ್ರೀ ರಾಮಕೃಷ್ಣರ ಜೀವನ ಚರಿತೆ, ಮಕ್ಕಳ ಪುಸ್ತಕಗಳು: ಅನಾದಿ ಕಾಲದ ಮನುಷ್ಯ ,ಒಂದೇ ರಾತ್ರಿ ಒಂದೇ ಹಗಲು ,ಗಜರಾಜ, ಗೆದ್ದವರ ಸತ್ಯ ,ಢಂ ಢಂ ಢೋಲು ,ನರನೋ ವಾನರನೋ,ಮರಿಯಪ್ಪನ ಸಾಹಸಗಳು, ಮಂಗನ ಮದುವೆ, ಸೂರ್ಯ ಚಂದ್ರ ,ಹುಲಿರಾಯ, ಶೈಕ್ಷಣಿಕ ಮಕ್ಕಳ ಶಿಕ್ಷಣ: ಓದುವ ಆಟ, ಗೃಹ ವಿಜ್ಞಾನ (೧,೨,೩), ಚಿತ್ರಮಯ ದಕ್ಷಿಣ ಕನ್ನಡ ,ಚಿತ್ರಮಯ ದಕ್ಷಿಣ ಕನ್ನಡ – ಅಂದು, ಇಂದು ,ಚಿತ್ರಮಯ ದಕ್ಷಿಣ ಹಿಂದುಸ್ತಾನ, ನಾಗರಿಕತೆಯ ಹೊಸ್ತಿಲಲ್ಲಿ, ರಮಣ ತಾತ, ಸಮಾಜ ನೀತಿ (೧,೨,೩), ಸಾಮಾನ್ಯ ವಿಜ್ಞಾನ (೧,೨,೩), ಸಿರಿಗನ್ನಡ ಪಾಠಮಾಲೆ (೧,೨,೩,೪,೫,೬,೭) , ಹೂಗನ್ನಡ ಪಾಠಮಾಲೆ (೧,೨,೩,೪,೫,೬,೭,೮), ವಯಸ್ಕರ ಶಿಕ್ಷಣ: ಅಳಿಲ ಭಕ್ತಿ ಮಳಲ ಸೇವೆ, ಕರ್ನಾಟಕದ ಜಾನಪದ ಕಲೆಗಳು, ಕೋಳಿ ಸಾಕಣೆ, ಜೋಗಿ ಕಂಡ ಊರು, ದಕ್ಷಿಣ ಹಿಂದುಸ್ತಾನದ ನದಿಗಳು , ದೇವ ಒಲಿದ ಊರು ,ಬೇರೆಯವರೂ ಸರಿ ಇರಬಹುದು, ಹುಟ್ಟು ಸಾವು ಒಟ್ಟು ಒಟ್ಟು , ಆಂಗ್ಲ ಭಾಷೆಯಲ್ಲಿ ಸಾಹಿತ್ಯ Folk Art of Karnataka, Karnataka Paintings ,My Concern for Life, Literature and Art, Picturesque South Kanara, Yakshagana, ಪ್ರಶಸ್ತಿ/ಪುರಸ್ಕಾರಗಳು: ಜ್ಞಾನಪೀಠ ಪ್ರಶಸ್ತಿ , ಪದ್ಮಭೂಷಣ ಪ್ರಶಸ್ತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬) - ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್ ಎ (೧೯೦೯), ಬಿ ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ ೧೯೪೩ ರವವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣ ಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು. ಸಾಹಿತ್ಯ ೧೯೧೦ ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ 'ಮಾತುಗಾರ ರಾಮಣ್ಣ' ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩. ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, "ಜೀವನ" ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. ೨೦ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು. ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಅವರ ಒಂದು ಸಣ್ಣ ಕಥೆಯನ್ನು ರಾಜಾಜಿಯವರು ತಮಿಳಿಗೆ ಅನುವಾದಿಸಿದರು. ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳಿಗೆ ಮಾಸ್ತಿ ಅವರ ಸಣ್ಣ ಕತೆಗಳು ಅನುವಾದಗೊಂಡಿವೆ. ದೂರದರ್ಶನದಲ್ಲಿ ಕೆಲವು ಕತೆಗಳು ಅಭಿನಯಿಸಲ್ಪಟ್ಟು ಪ್ರಸಾರವಾಗಿವೆ. ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ. ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. "ಸುಬ್ಬಣ್ಣ" ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು. ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. "ಭಾರತತೀರ್ಥ", "ಆದಿಕವಿ ವಾಲ್ಮೀಕಿ" ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ "ಶ್ರೀರಾಮ ಪಟ್ಟಾಭಿಷೇಕ" ಅವರ ಒಂದು ಕಾವ್ಯ. ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆಗಳನ್ನೂ, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್‌ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ. ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ - ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು "ಚನ್ನಬಸವನಾಯಕ". ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ. ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು. ೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು. ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು ಗೌರವಿಸಿದ್ದರು. ೧೯೭೨ರಲ್ಲಿ "ಶ್ರೀನಿವಾಸ" ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. ಮುಖ್ಯ ಕೃತಿಗಳು: ಸಣ್ಣ ಕತೆಗಳ ಸಂಗ್ರಹ: ಕೆಲವು ಸಣ್ಣ ಕತೆಗಳು (೧೯೨೦),ಸಣ್ಣ ಕತೆಗಳ(೧೫ ಸಂಪುಟ ೧೯೩೦-೧೯೮೪) ನೀಳ್ಗತೆ: ಸುಬ್ಬಣ್ಣ (೧೯೨೮),ಶೇಷಮ್ಮ(೧೯೭೬), ಕಾವ್ಯ ಸಂಕಲನಗಳು: ಬಿನ್ನಹ(೧೯೨೨),ಅರುಣ(೧೯೨೪),ತಾವರೆ(೧೯೩೦),ಸಂಕ್ರಾಂತಿ(೧೯೬೯) ನವರಾತ್ರಿ(೫ ಭಾಗ ೧೯೪೪-೧೯೫೩) ಜೀವನ ಚರಿತ್ರೆ: ರವೀಂದ್ರನಾಥ ಠಾಕೂರ(೧೯೩೫),ಶ್ರೀ ರಾಮಕೃಷ್ಣ(೧೯೩೬) ಪ್ರಬಂಧ: ಕನ್ನಡದ ಸೇವೆ(೧೯೩೦),ವಿಮರ್ಶೆ (೪ ಸಂಪುಟ ೧೯೨೮-೧೯೩೯) ಜನತೆಯ ಸಂಸ್ಕ್ರುತಿ(೧೯೩೧),ಜನಪದ ಸಾಹಿತ್ಯ(೧೯೩೭),ಆರಂಭದ ಆಂಗ್ಲ ಸಾಹಿತ್ಯ(೧೯೭೯) ನಾಟಕ: ಶಾಂತಾ(೧೯೨೩),ತಾಳೀಕೋಟೆ(೧೯೨೯), ಶಿವಛತ್ರಪತಿ(೧೯೩೨),ಯಶೋಧರಾ(೧೯೩೩) ಕಾಕನಕೋಟೆ(೧೯೩೮) ಕಾದಂಬರಿ: ಚೆನ್ನಬಸವ ನಾಯಕ(೧೯೫೦), ಚಿಕವೀರ ರಾಜೇಂದ್ರ(೧೯೫೬) ಪ್ರಶಸ್ತಿಗಳು: ಜ್ಞಾನಪೀಠ ಪ್ರಶಸ್ತಿ(೧೯೮೩),ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್(೧೯೭೭) ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(೧೯೫೬),ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(೧೯೬೮) ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(೧೯೫೩), ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(೧೯೪೬) ವಿನಾಯಕ ಕೃಷ್ಣ ಗೋಕಾಕ ಶ್ರೀ ವಿನಾಯಕ ಕೃಷ್ಣ ಗೋಕಾಕ್ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಸಮಿತಿಯ ಅಧ್ಯಕ್ಷರಾಗುವುದೇ ಒಂದು ದೊಡ್ಡ ಗೌರವ. ಅಂಥವರಿಗೇ ಜ್ಞಾನಪೀಠ ಪ್ರಶಸ್ತಿ ಸಹ ಬರುವುದೆಂದರೆ, ಸಾಮಾನ್ಯ ಸಾಧನೆಯಲ್ಲ! ತಮ್ಮ ಹಲವು ಸಾಧನೆ, ಸಿದ್ಧಿಗಳಿಂದ ಕನ್ನಡಕ್ಕೆ ಅಂತರರಾಷ್ಟ್ರೀಯ ಖ್ಯಾತಿಯನ್ನೂ, ಗೌರವವನ್ನೂ ತಂದು ಕೊಟ್ಟ ವಿನಾಯಕ ಕೃಷ್ಣರಾವ್ ಗೋಕಾಕರು ೧೯೦೯ರ ಅಗಸ್ಟ್.೧೦ರಂದು ಧಾರವಾಡ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ಅವರ ತಂದೆ ಕೃಷ್ಣರಾಯರು ವಕೀಲರಾಗಿದ್ದರು. ವಿನಾಯಕರು ಹುಟ್ಟಿದ ಕಾಲಕ್ಕೆ ಸವಣೂರು ಒಂದು ಪುಟ್ಟ ಸಂಸ್ಥಾನವಾಗಿತ್ತು. ಒಬ್ಬ ನವಾಬನ ಆಡಳಿತಕ್ಕೆ ಒಳಪಟ್ಟಿತ್ತು. ವಿನಾಯಕರ ವಿಧ್ಯಾಭ್ಯಾಸ ಸವಣೂರು ಧಾರವಾಡಗಳಲ್ಲಿ ನಡೆಯಿತು. ಹೀಗೆ ವಿದ್ಯಾಭ್ಯಾಸದ ಸಲುವಾಗಿ ಧಾರವಾಡದಲ್ಲಿದ್ದಾಗಲೇ ಅವರಿಗೆ ಕನ್ನಡದ ವರಕವಿ ಬೇಂದ್ರೆಯವರ ಸಂಪರ್ಕ ಒದಗಿ ಬಂತು. ಗೋಕಾಕರ ಸಾಹಿತ್ಯ ಕೃಷಿ ಬೇಂದ್ರೆಯವರ ಮಾರ್ಗದರ್ಶನ, ಪ್ರೋತ್ಸಾಹಗಳಿಂದ ಮುಂದುವರೆಯಿತು. ಬೇಂದ್ರೆ ತಮ್ಮ ಕಾವ್ಯ ಗುರುವೂ, ಮಾರ್ಗದರ್ಶಕರೂ ಆಗಿದ್ದರೆಂದು ಗೋಕಾಕರೇ ಹೇಳಿಕೊಂಡಿದ್ದಾರೆ. ಇಂಗ್ಲೀಷ್ ವಿಷಯದ ಎಂ.ಎ. ಪರೀಕ್ಷೆಯಲ್ಲಿ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ಗೋಕಾಕರು, ಕೂಡಲೇ ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದರು. ಅವರು ತಮ್ಮ ವೃತ್ತಿಯಲ್ಲಿ ತಮ್ಮನ್ನು ಪೂರ್ತಿಯಾಗಿ ತೊಡಗಿಸಿಕೊಂಡರು.ಇದರ ಫಲವಾಗಿ ಕನ್ನಡದ ಗಂಡುಮೆಟ್ಟಿನ ನೆಲದ ಈ ಯುವಕ ಮರಾಠಿಗರನ್ನು ಕೂಡ ತಮ್ಮ ಕಡೆ ಸೆಳೆದುಕೊಂಡ. ಇವರ ತರಗತಿಗಳಿಗೆ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕೂಡ ಪಾಠ ಕೇಳಲು ಬರುತ್ತಿದ್ದರಂತೆ. ಇವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಫರ್ಗ್ಯೂಸನ್ ಕಾಲೇಜಿನ ಆಡಳಿತ ವರ್ಗವೇ ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಇವರನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಕಳಿಸಿತು. ಗೋಕಾಕರು ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಓದಿದರು. ಪರೀಕ್ಷೆಯನ್ನು ಮೊದಲ ದರ್ಜೆಯಲ್ಲಿ ಪಾಸು ಮಾಡಿದರು. ಹೀಗೆ ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿದ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾದರು. ಇಂಗ್ಲೆಂಡಿನಿಂದ ಹಿಂತಿರುಗಿ ಬಂದವರಿಗೆ ಸಾಂಗ್ಲಿಯ ವಿಲ್ಲಿಂಗ್‌ಡನ್ ಕಾಲೇಜಿನ ಪ್ರಿನ್ಸಿಪಾಲ ಹುದ್ದೆ ಕಾದಿತ್ತು. ಅನಂತರ ಕ್ರಮೇಣ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕನಾದವನೊಬ್ಬನು ಏರಬಹುದಾದ ಅತ್ಯುನ್ನತ ಹುದ್ದೆಯಾದ ಉಪಕುಲಪತಿ ಹುದ್ದೆಗೂ ಏರಿದರು. ಅವರು ಸಾಂಗ್ಲಿಯ ವಿಲ್ಲಿಂಗ್‌ಡನ್ ಕಾಲೇಜು, ಪುಣೆಯ ಫರ್ಗೂಸನ್ ಕಾಲೇಜು, ವೀಸನಗರದ ಕಾಲೇಜು, ಕೊಲ್ಲಾಪುರದ ರಾಜಾರಾಮ ಕಾಲೇಜು, ಧಾರವಾಡದ ಕರ್ನಾಟಕ ಕಾಲೇಜು, ಉಸ್ಮಾನಿಯಾ ವಿಶ್ವವಿದ್ಯಾಲಯ, ಹೈದರಾಬಾದಿನಲ್ಲಿರುವ ಇಂಗ್ಲೀಷ್ ಮತ್ತು ವಿದೇಶೀ ಭಾಷೆಗಳ ಕೇಂದ್ರ ಸಂಸ್ಥೆ, ಸಿಮ್ಲಾದಲ್ಲಿರುವ ಉನ್ನತ ಅಧ್ಯಯನ ಸಂಸ್ಥೆ -ಮೊದಲಾದ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಶ್ರೀಸತ್ಯಸಾಯಿ ಉನ್ನತ ಅಧ್ಯಯನ ಸಂಸ್ಥೆಯ ಉಪಕುಲಪತಿಗಳಾಗಿದ್ದರು. ಜಪಾನ್, ಅಮೆರಿಕ, ಇಂಗ್ಲೆಂಡ್, ಬೆಲ್ಜಿಯಂ, ಗ್ರೀಸ್, ಪೂರ್ವ ಆಫ್ರಿಕ ಮೊದಲಾದ ದೇಶಗಳಿಗೆ ಭಾರತದ ಸಾಂಸ್ಕೃತಿಕ ರಾಯಭಾರಿಯಾಗಿ ಹೋಗಿ ಬಂದರು. ತಮ್ಮ ಬದುಕಿನುದ್ದಕ್ಕೂ ಕನ್ನಡದ ಕೀರ್ತಿಪತಾಕೆಗಳನ್ನು ದೇಶದ ಒಳಗೂ ಹೊರಗೂ ಹಾರಿಸಿದ ಗೋಕಾಕರು ೧೯೯೨ರ ಎಪ್ರಿಲ್.೨೮ರಂದು ಬೆಳಗಿನ ಜಾವ ಮುಂಬಯಿಯಲ್ಲಿ ನಿಧನರಾದರು. ಕೃತಿಗಳು ಈ ಶತಮಾನದ ಕನ್ನಡ ಲೇಖಕರಲ್ಲಿ ಅಗ್ರಗಣ್ಯರಾಗಿರುವ ವಿ.ಕೃ. ಗೋಕಾಕರ ಬರಹ ತುಂಬ ವಿಪುಲವೂ, ವ್ಯಾಪಕವೂ ಆದದ್ದು. ಕನ್ನಡ, ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಗೋಕಾಕರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇಂಗ್ಲೀಷಿನಲ್ಲಿ ಅವರು ಬರೆದಿರುವ ಕೃತಿಗಳ ಸಂಖ್ಯೆ ಮೂವತ್ತಕ್ಕೂ ಹೆಚ್ಚು. ಅವರ ಮೊದಲ ಪ್ರಕಟಿತ ಕೃತಿ "ಕಲೋಪಾಸಕರು". ಅವರು ಇಂಗ್ಲೆಂಡಿಗೆ ಸಮುದ್ರದ ಮೂಲಕ ಹೋಗಿ ಬಂದ ಅನುಭವಗಳನ್ನು ಆಧರಿಸಿ ರಚಿಸಿದ "ಸಮುದ್ರ ಗೀತೆಗಳು", "ಸಮುದ್ರದಾಚೆಯಿಂದ"- ಇವು ಮಹತ್ವದ ಕೃತಿಗಳಾಗಿವೆ. ಸಮುದ್ರ ಗೀತೆಗಳು ಕವನ ಸಂಕಲನದಲ್ಲಿರುವ "ಕೊಡದಿರು ಶರಧಿಗೆ ಷಟ್ಪದಿಯ ದೀಕ್ಷೆಯನು" ಎಂಬ ಸಾಲಂತೂ ತುಂಬ ಪ್ರಸಿದ್ಧವಾಗಿದೆ. ಕನ್ನಡ ಸಾಹಿತ್ಯದಲ್ಲಿ "ನವ್ಯ" ಎಂಬ ಹೊಸಮಾರ್ಗ ಗೋಕಾಕರಿಂದಲೇ ಪ್ರಾರಂಭಗೊಂಡಿತು ಎಂಬ ಅಭಿಪ್ರಾಯವಿದೆ. ಗೋಕಾಕರು ನಾಟಕ, ಪ್ರಬಂಧ, ಪ್ರವಾಸ ಕಥನ, ವಿಮರ್ಶೆ ಮುಂತಾದ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಕನ್ನಡದ ಬೃಹತ್ ಕಾದಂಬರಿಗಳಲ್ಲಿ ಒಂದಾದ "ಸಮರಸವೇ ಜೀವನ" ಗೋಕಾಕರದ್ದೇ ಕೃತಿ. "ಜನನಾಯಕ" ಅವರ ಸುಪ್ರಸಿದ್ಧ ನಾಟಕ. "ಭಾರತ ಸಿಂಧು ರಶ್ಮಿ" ವಿನಾಯಕರು ರಚಿಸಿದ ಮಹಾಕಾವ್ಯ. ಹನ್ನೆರಡು ಖಂಡಗಳು, ಮೂವತ್ತೈದು ಸಾವಿರ ಸಾಲುಗಳ ಈ ಮಹಾಕಾವ್ಯ ಋಗ್ವೇದ ಕಾಲದ ಜನಜೀವನವನ್ನು ಕುರಿತದ್ದು. ವಿಶ್ವಾಮಿತ್ರ ಈ ಕಾವ್ಯದ ನಾಯಕ. ಗೌರವಗಳು ಮತ್ತು ಪ್ರಶಸ್ತಿಗಳು ಗೋಕಾಕರು ಸಾಹಿತ್ಯ-ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗಮನಿಸಿ ಜನತೆಯೂ, ಸರ್ಕಾರವೂ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡಿ ಸನ್ಮಾನಿಸಿವೆ. ಬಳ್ಳಾರಿಯಲ್ಲಿ ೧೯೫೮ರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ೧೯೬೭ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ೧೯೭೯ರಲ್ಲಿ ಕ್ಯಾಲಿಫೋರ್ನಿಯಾದ ಫೆಸಿಫಿಕ್ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪದವಿ ಮತ್ತು ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಪದವಿ ಇವೆರಡೂ ಕನ್ನಡಿಗರೊಬ್ಬರಿಗೆ ಮೊದಲ ಬಾರಿಗೆ ಸಂದ ಗೌರವಗಳಾಗಿವೆ. ಅವರ ಮೇರು ಕೃತಿ "ಭಾರತ ಸಿಂಧು ರಶ್ಮಿ"ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಭಾರತೀಯ ವಿದ್ಯಾಭವನದ ರಾಜಾಜಿ ಪ್ರಶಸ್ತಿ ಮತ್ತು ಐ.ಬಿ.ಎಚ್. ಪ್ರಶಸ್ತಿಗಳೂ ದೊರಕಿವೆ. ಗೋಕಾಕರ "ದ್ಯಾವಾ ಪೃಥಿವೀ" ಕವನ ಸಂಕಲನಕ್ಕೆ ೧೯೬೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಬಂದಿತು. ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡುವಾಗ ಪ್ರಶಸ್ತಿ ಆಯ್ಕೆ ಸಮಿತಿ ಅವರ ಯಾವುದೇ ಕೃತಿಯನ್ನು ಹೆಸರಿಸಲಿಲ್ಲ. ಕನ್ನಡ ಸಾಹಿತ್ಯ ಲೋಕಕ್ಕೆ ಅವರು ೧೯೬೯ರಿಂದ ೧೯೮೪ರ ಅವಧಿಯಲ್ಲಿ ನೀಡಿದ ಅನುಪಮ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದೆ. ಯಾವುದೇ ಕೃತಿಯನ್ನು ಹೆಸರಿಸದೆ ಜ್ಞಾನಪೀಠ ಪ್ರಶಸ್ತಿ ಕೊಟ್ಟಿದ್ದು ಇದೇ ಮೊದಲು. ಆದರೆ ಬಹಳ ಜನರು ಗೋಕಾಕರಿಗೆ ಅವರ ಮೇರು ಕೃತಿ "ಭಾರತ ಸಿಂಧು ರಶ್ಮಿ"ಗಾಗಿಯೇ ಈ ಪ್ರಶಸ್ತಿ ಬಂದಿದೆ ಎಂದು ಭಾವಿಸಿದ್ದಾರೆ. ಸಾಮಾನ್ಯವಾಗಿ ಜ್ಞಾನಪೀಠ ಪ್ರಶಸ್ತಿಯನ್ನು ದೆಹಲಿಯಲ್ಲಿ ನೀಡಲಾಗುತ್ತದೆ. ಆದರೆ ಗೋಕಾಕರಿಗೆ ಪ್ರಶಸ್ತಿಯನ್ನು ನೀಡಲು ಸ್ವತಃ ಈ ದೇಶದ ಪ್ರಧಾನ ಮಂತ್ರಿಗಳೇ ಮುಂಬಯಿಗೆ ಆಗಮಿಸಿದರು. ಇದು ಗೋಕಾಕರು ಎಷ್ಟು ಮಹತ್ವದ ವ್ಯಕ್ತಿ ಎಂಬುದಕ್ಕೆ ಒಂದು ನಿದರ್ಶನ. ಯು.ಆರ್.ಅನಂತಮೂರ್ತಿ ಶ್ರೀ ಯು ಆರ್ ಅನಂತಮೂರ್ತಿಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಕನ್ನಡಕ್ಕೆ ಈ ಗೌರವ ತಂದುಕೊಟ್ಟವರು ಡಾ ಯು.ಆರ್. ಅನಂತಮೂರ್ತಿ. ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ ಕೃತಿಗಳು ಇಂಗ್ಲೀಷಿಗೆ ಸಮರ್ಥವಾಗಿ ಅನುವಾದಗೊಳ್ಳಲು ಸಾಧ್ಯವಿಲ್ಲ. ಇಂತಹ ಸ್ಥಿತಿಯಲ್ಲಿ ಸಾಹಿತ್ಯಕ್ಕೆ ನೊಬೆಲ್ ಪ್ರಶಸ್ತಿ ಅನಗತ್ಯ ಎಂದು ಅವರ ವಾದ. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಮೊದಲ ದರ್ಜೆಯ ವಿಮರ್ಶಕರೂ, ಬರಹಗಾರರೂ ಆದ ಅನಂತಮೂರ್ತಿ ಕನ್ನಡದ ಮಹತ್ವವನ್ನು ಹೊರಜಗತ್ತಿಗೆ ತಿಳಿಸುವ ಕೆಲಸ ಮಾಡುತ್ತ ಬಂದವರು. ತಮ್ಮ ಬಹುಚರ್ಚಿತ ಸಂಸ್ಕಾರ ಕಾದಂಬರಿಯಿಂದ ಭಾರತೀಯ ಸಾಹಿತ್ಯ ಮತ್ತು ಚಲನಚಿತ್ರ ರಂಗಗಳಲ್ಲಿ ಒಂದು ಸಣ್ಣ ಕ್ರಾಂತಿಯನ್ನೇ ಮಾಡಿದ ಅನಂತಮೂರ್ತಿ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಹಳ್ಳಿಯಲ್ಲಿ. ಇಬ್ಬರು ಜ್ಞಾನಪೀಠ ಪ್ರಶಸ್ತಿ ವಿಜೇತ (ಕುವೆಂಪು ಮತ್ತು ಅನಂತಮೂರ್ತಿ) ರನ್ನು ನೀಡಿದ ಹೆಗ್ಗಳಿಕೆ ತೀರ್ಥಹಳ್ಳಿ ತಾಲ್ಲೂಕಿನದು. ಇವರು ಹುಟ್ಟಿದ್ದು ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ. ತಾಯಿ ಸತ್ಯಮ್ಮ (ಸತ್ಯಭಾಮ). ದೂರ್ವಾಸಪುರದ ಸಾಂಪ್ರದಾಯಿಕ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಆರಂಭಿಸಿದ ಅನಂತಮೂರ್ತಿಯವರ ಓದು ಅನಂತರ ತೀರ್ಥಹಳ್ಳಿ, ಮೈಸೂರುಗಳಲ್ಲಿ ಮುಂದುವರೆಯಿತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದ ಇವರು ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡಿಗೆ ಹೋದರು. ಕಾಮನ್‍ವೆಲ್ತ್ ವಿದ್ಯಾರ್ಥಿ ವೇತನ ಪಡೆದ ಇವರು ಬರ್ಮಿಂಗ್‍ಹ್ಯಾಮ್ ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಎಂಬ ವಿಷಯದಲ್ಲಿ ೧೯೬೬ರಲ್ಲಿ ಪಿಎಚ್.ಡಿ. ಪಡೆದರು. ವೃತ್ತಿ ಜೀವನ ೧೯೭೦ರಿಂದ ಮೈಸೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ಅನಂತಮೂರ್ತಿಯವರು, ೧೯೮೭ರಲ್ಲಿ ಕೇರಳದ ಕೋಟ್ಟಯಂನ ಮಹಾತ್ಮಾಗಾಂಧಿ ವಿಶ್ವವಿದ್ಯಾಲಯದ ಉಪಕುಲಗತಿಗಳಾಗಿದ್ದರು. ೧೯೯೨-೯೩ರ ಅವಧಿಯಲ್ಲಿ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯದ ಅಧ್ಯಕ್ಷರಾಗಿದ್ದರು. ೧೯೯೩ರಲ್ಲಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಗೋಕಾಕರ ಅನಂತರ ಈ ಸಂಸ್ಥೆಯ ಅಧ್ಯಕ್ಷರಾದ ಎರಡನೆಯ ಕನ್ನಡಿಗರು ಇವರು. ಅನಂತಮೂರ್ತಿಯವರು ದೇಶವಿದೇಶಗಳ ಹಲವು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಜವಾಹರಲಾಲ್ ನೆಹರೂ ವಿ.ವಿ., ಜರ್ಮನಿಯ ತೂಬಿಂಗೆನ್ ವಿ.ವಿ., ಅಮೇರಿಕ ದೇಶದ ಐಯೊವಾ ವಿ.ವಿ., ಟಫಟ್ಸ್ ವಿ.ವಿ., ಕೊಲ್ಲಾಪುರದ ಶಿವಾಜಿ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿದ್ದರು. ಬರಹಗಾರರಾಗಿ, ಭಾಷಣಕಾರರಾಗಿ ಅನಂತಮೂರ್ತಿಯವರು ದೇಶದ ಒಳಗೆ ಮತ್ತು ಹೊರಗೆ ಹಲವಾರು ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ; ಉಪನ್ಯಾಸ ನೀಡಿದ್ದಾರೆ. ೧೯೮೦ರಲ್ಲಿ ಸೋವಿಯತ್ ರಷ್ಯಾ, ಹಂಗೇರಿ, ಪಶ್ಚಿಮ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಗೆ ಭೇಟಿ ನೀಡಿದ ಭಾರತೀಯ ಲೇಖಕರ ಬಳಗದ ಸದಸ್ಯರಾಗಿದ್ದರು. ಮಾರ್ಕ್ಸ್‌ವಾದದಿಂದ ತುಂಬ ಪ್ರಭಾವಿತರಾಗಿದ್ದ ಇವರು ತಮ್ಮ ಹಲವಾರು ಅಭಿಪ್ರಾಯಗಳನ್ನು ಪರೀಕ್ಷಿಸಿ ನೋಡಲು ಈ ಭೇಟಿ ನೆರವಾಯಿತು. ಸೋವಿಯತ್ ಪತ್ರಿಕೆಯೊಂದರ ಸಲಹಾ ಸಮಿತಿಯ ಸದಸ್ಯರಾಗಿ ೧೯೮೯ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ರಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ ಭಾರತೀಯ ಬರಹಗಾರರ ಬಳಗಕ್ಕೆ ಇವರು ನಾಯಕರಾಗಿದ್ದರು. ಇವಲ್ಲದೆ ದೇಶವಿದೇಶಗಳ ಹಲವಾರು ವೇದಿಕೆಗಳಿಂದ ನೂರಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ. ಇಷ್ಟೇ ಅಲ್ಲದೆ, ಅನಂತಮೂರ್ತಿಯವರು ಕನ್ನಡದ ಹಲವಾರು ಸಾಹಿತ್ಯ ದಿಗ್ಗಜರನ್ನು ರೇಡಿಯೋ ಮತ್ತು ದೂರದರ್ಶನಗಳ ಮೂಲಕ ಜನತೆಗೆ ಪರಿಚಯಿಸಿಕೊಟ್ಟಿದ್ದಾರೆ. ಮೈಸೂರು ಆಕಾಶವಾಣಿಗಾಗಿ ಗೋಪಾಲಕೃಷ್ಣ ಅಡಿಗ, ಶಿವರಾಮ ಕಾರಂತ, ಆರ್.ಕೆ. ನಾರಾಯಣ್, ಆರ್.ಕೆ.ಲಕ್ಷ್ಮಣ್ ಮತ್ತು ಜನರಲ್ ಕಾರಿಯಪ್ಪ ಅವರನ್ನು ಸಂದರ್ಶಿಸಿದ್ದಾರೆ. ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರುಗಳನ್ನು ಕುರಿತು ದೂರದರ್ಶನವು ನಿರ್ಮಿಸಿದ ಸಾಕ್ಷ್ಯ ಚಿತ್ರಗಳಲ್ಲಿ ಸಂದರ್ಶಕರಾಗಿ ಭಾಗವಹಿಸಿದ್ದಾರೆ. ಸಾಹಿತ್ಯ ಅನಂತಮೂರ್ತಿಯವರು ಪ್ರಸಿದ್ಧರಾಗಿರುವುದು ಕನ್ನಡದ ಸಣ್ಣಕತೆಗಾರರಾಗಿ ಮತ್ತು ಕಾದಂಬರಿಕಾರರಾಗಿ. ೧೯೫೫ರಲ್ಲಿ "ಎಂದೆಂದೂ ಮುಗಿಯದ ಕತೆ" ಕಥಾ ಸಂಕಲನದಿಂದ ಅವರ ಸಾಹಿತ್ಯ ಕೃಷಿ ಆರಂಭವಾಯಿತು. ಮೌನಿ, ಪ್ರಶ್ನೆ, ಆಕಾಶ ಮತ್ತು ಬೆಕ್ಕು -ಇವರ ಕಥಾಸಂಕಲನಗಳು. ಈ ಎಲ್ಲ ಕತೆಗಳನ್ನೂ ಒಳಗೊಂಡ "ಮೂರು ದಶಕದ ಕಥೆಗಳು" ೧೯೮೯ರಲ್ಲಿ ಹೊರಬಂದಿದೆ. ಹಿರಿಯ ಸಮಾಜವಾದಿ ಚಿಂತಕ ಶಾಂತವೇರಿ ಗೋಪಾಲಗೌಡರ ಸಮೀಪವರ್ತಿಯಾಗಿದ್ದ ಅನಂತಮೂರ್ತಿ ಅವರು ಗಾಂಧೀಜಿ ಮತ್ತು ಲೋಹಿಯಾ ಅವರ ಪ್ರಭಾವಕ್ಕೆ ಒಳಗಾದವರು. ಇವರ ಬರಹದಲ್ಲಿ ಈ ಎರಡೂ ಪ್ರಭಾವಗಳು ಎದ್ದು ಕಾಣುತ್ತವೆ. ೧೯೬೫ರಲ್ಲಿ ಇವರ ಮೊದಲ ಕಾದಂಬರಿ "ಸಂಸ್ಕಾರ" ಪ್ರಕಟವಾಯಿತು. ಪ್ರಕಟವಾದಾಗ ಮತ್ತು ಚಲನಚಿತ್ರವಾದಾಗ ತುಂಬ ಸುದ್ದಿ ಮಾಡಿದ ಈ ಕಾದಂಬರಿ ಹಲವಾರು ದೇಶೀಯ ಮತ್ತು ವಿದೇಶೀಯ ಭಾಷೆಗಳಿಗೆ ಅನುವಾದಗೊಂಡಿದೆ. ಭಾರತೀಪುರ, ಅವಸ್ಥೆ ಮತ್ತು ಭವ -ಇವರ ಇತರ ಕಾದಂಬರಿಗಳು. "ಆವಾಹನೆ" ಎಂಬ ಒಂದು ನಾಟಕವನ್ನು ಬರೆದಿರುವ ಅನಂತಮೂರ್ತಿ "೧೫ ಪದ್ಯಗಳು", "ಮಿಥುನ" ಮತ್ತು "ಅಜ್ಜನ ಹೆಗಲ ಸುಕ್ಕುಗಳು" ಎಂಬ ಮೂರು ಕವನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಪ್ರಜ್ಞೆ ಮತ್ತು ಪರಿಸರ, ಪೂರ್ವಾಪರ, ಸಮಕ್ಷಮ -ಇವು ಅವರ ಪ್ರಬಂಧ ಸಂಕಲನಗಳು. ಇಷ್ಟಲ್ಲದೆ ಇಂಗ್ಲೀಷಿನಲ್ಲಿ ಇವರು ಬರೆದಿರುವ ಹಲವಾರು ಪ್ರಬಂಧಗಳು ದೇಶ-ವಿದೇಶಗಳ ಮೌಲಿಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ೧೯೮೧ರಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಿಷಯಗಳಿಗೆಂದು "ರುಜುವಾತು" ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಾರಂಭಿಸಿದರು. ಅನಂತಮೂರ್ತಿಯವರ ಕೆಲವು ಕತೆಗಳು ವಿಶ್ವದ ಅತ್ಯುತ್ತಮ ಸಣ್ಣ ಕತೆಗಳು ಎಂದು ಹಲವು ವಿಮರ್ಶಕರ ಅಭಿಪ್ರಾಯ. ಸೂರ್ಯ ಕುದುರೆ, ನವಿಲುಗಳು, ಬರ, ಘಟಶ್ರಾದ್ಧ, ತಾಯಿ, ಹುಲಿಯ ಹೆಂಗರಳು ಈ ಸಾಲಿಗೆ ಸೇರುತ್ತವೆ. ಅನಂತಮೂರ್ತಿಯವರ ಸಂಸ್ಕಾರ, ಅವಸ್ಥೆ ಕಾದಂಬರಿಗಳನ್ನು ಮತ್ತು ಬರ, ಘಟಶ್ರಾದ್ಧ ಕತೆಗಳನ್ನು ಆಧರಿಸಿ ಚಲನಚಿತ್ರಗಳು ನಿರ್ಮಾಣವಾಗಿವೆ. ಇವೆಲ್ಲವೂ ಮಹತ್ವದ ಚಿತ್ರಗಳಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿವೆ. ಘಟಶ್ರಾದ್ಧ ಕತೆಯನ್ನು ಆಧರಿಸಿ "ದೀಕ್ಷಾ" ಎಂಬ ಹಿಂದಿ ಚಲನಚಿತ್ರವೂ ತಯಾರಾಗಿದೆ. ಸಂಸ್ಕಾರ ಮತ್ತು ಘಟಶ್ರಾದ್ಧ ಚಲನಚಿತ್ರಗಳು ಭಾರತ ಸರಕಾರದಿಂದ ಸ್ವರ್ಣಕಮಲ ಪ್ರಶಸ್ತಿಯನ್ನು ಪಡೆದಿವೆ. ಪ್ರಶಸ್ತಿಗಳು: ಸಂಸ್ಕಾರ, ಘಟಶ್ರಾದ್ಧ ಮತ್ತು ಬರ ಚಿತ್ರಗಳ ಅತ್ಯುತ್ತಮ ಕತೆಗಾಗಿ ಪ್ರಶಸ್ತಿ ಪಡೆದಿರುವ ಅನಂತಮೂರ್ತಿಯವರಿಗೆ ಹಲವಾರು ಪ್ರಶಸ್ತಿಗಳು ಬಂದಿವೆ. ೧೯೮೩ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೪ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,೧೯೯೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೯೪ರಲ್ಲಿ ಮಾಸ್ತಿ ಪ್ರಶಸ್ತಿ -ಇವು ಅನಂತಮೂರ್ತಿಯವರಿಗೆ ಬಂದ ಮನ್ನಣೆಗಳಲ್ಲಿ ಕೆಲವು. ೧೯೯೪ರಲ್ಲಿ ಬಂದಿರುವ ಜ್ಞಾನಪೀಠ ಪ್ರಶಸ್ತಿ ಇವೆಲ್ಲವುಗಳಿಗೆ ಕಳಶಪ್ರಾಯವಾದುದು. ಗಿರೀಶ್ ಕಾರ್ನಾಡ್ ಶ್ರೀ ಗಿರೀಶ್ ರಘುನಾಥ್ ಕಾರ್ನಾಡ್ (ಹುಟ್ಟು - ಮೇ ೧೯, ೧೯೩೮) ಕನ್ನಡಕ್ಕೆ ಏಳನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡ ಸಾಹಿತ್ಯದ ನಾಟಕ ಕ್ಷೇತ್ರಕ್ಕೆ ಸಾಹಿತಿ. ಭಾರತದಲ್ಲೇ ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದವರಲ್ಲಿ ಕಾರ್ನಾಡ್ ಮೊದಲಿಗರು. ಹೀಗಾಗಿ ಕಾರ್ನಾಡ್ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯ ತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು. ಕನ್ನಡದಲ್ಲಿ ನಾಟಕ ರಚಿಸುತ್ತ, ಇತರ ಭಾರತೀಯ ಭಾಷೆಗಳಲ್ಲಿ ಸಂಪರ್ಕವಿಟ್ಟುಕೊಂಡು ಸಾಂಸ್ಕೃತಿಕ ವಕ್ತಾರರಾದ ಕಾರ್ನಾಡ್ ನಟರಾಗಿ, ನಿರ್ದೇಶಕರಾಗಿ ಹೆಸರಾಗಿದ್ದಾರೆ. ಆರಂಭದಲ್ಲಿ ರಂಗಭೂಮಿ ನಟರಾಗಿದ್ದವರು ಹೊಸ ವಿಚಾರಗಳತ್ತ ಗಮನ ಹರಿಸಿ ನಾಟಕ ರಚನೆಗೆ ಚಿಂತಿಸಿದರು. ಹೀಗಾಗಿ ಪುರಾಣ, ಇತಿಹಾಸಗಳು ವಾಸ್ತವ ನೆಲೆಗಟ್ಟಿನಲ್ಲಿ ನೇಯಲ್ಪಟ್ಟವು. ಗಿರೀಶ ಕಾರ್ನಾಡ್‌ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾಬಾಯಿ. ಪ್ರಗತಿಶೀಲ ಮನೋಭಾವದ ಡಾ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡುಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಬೆಳವಣಿಗೆಯಲ್ಲಿ ಸಹಾಯವಾಯಿತು. ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗು ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು.ಆ ಬಳಿಕ Rhodes scholorship ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಶಿಯನ್ ಆಗಿದ್ದಾರೆ. ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು. ಬಹುಶಃ ಕನ್ನಡದ ಒಬ್ಬ ನಾಟಕಕಾರ ಇಷ್ಟೊಂದು ಭಾಷೆಗೆ ಪರಿಚಯವಾದದ್ದು ಪ್ರಥಮ. ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ನೌಕರಿಯಲ್ಲಿದ್ದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು. ನಾಟಕರಚನೆ ಇಂಗ್ಲಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯಕೃತಿ "ಯಯಾತಿ" ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲಂಡಿನಿಂದ ಮರಳಿದ ಬಳಿಕ "ತುಘಲಕ" ಹಾಗೂ "ಹಯವದನ" ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕರಾಗಿದ್ದು,ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು:"ಅಂಜುಮಲ್ಲಿಗೆ", "ನಾಗಮಂಡಲ", "ತಲೆದಂಡ" ಹಾಗು "ಅಗ್ನಿ ಮತ್ತು ಮಳೆ". ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಾರ್ಪೊರೇಶನ್ ಇವರಿಗಾಗಿ ಬರೆದುಕೊಟ್ಟ ನಾಟಕ:"ಟಿಪ್ಪುವಿನ ಕನಸುಗಳು". ಚಿತ್ರರಂಗ "ಸಂಸ್ಕಾರ" ಚಲನಚಿತ್ರವು ಕನ್ನಡದ ಪ್ರಥಮ Artfilm. ಯು.ಆರ್.ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಈ ಚಲನಚಿತ್ರದಲ್ಲಿ ಗಿರೀಶ ಕಾರ್ನಾಡರದು ಪ್ರಮುಖ ಪಾತ್ರ, ಪ್ರಾಣೇಶಾಚಾರ್ಯರದು.ಪಿ.ಲಂಕೇಶಅವರದು ವಿರುದ್ಧ ವ್ಯಕ್ತಿತ್ವದ ಪಾತ್ರ.ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮರೆಡ್ಡಿ ಅವರು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲ ತಂದು ಕೊಟ್ಟ ಚಿತ್ನ. ಆ ನಂತರ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ. ವಿ. ಕಾರಂತರ ಜೊತೆಗೂಡಿ ವಂಶವೃಕ್ಷ ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪುರಸ್ಕಾರ ಪಡೆಯಿತು. ಮುಂದೆ "ತಬ್ಬಲಿಯು ನೀನಾದೆ ಮಗನೆ", "ಕಾಡು", "ಒಂದಾನೊಂದು ಕಾಲದಲ್ಲಿ" ಚಿತ್ರಗಳನ್ನು ನಿರ್ದೇಶಿಸಿದರು. "ಕಾಡು" ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು. ನಂತರ "ಉತ್ಸವ", "ಗೋಧೂಳಿ" ಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದರು. ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡಿತಿ ಕಾದಂಬರಿಯನ್ನು ಆಧರಿಸಿ "ಕಾನೂರು ಹೆಗ್ಗಡಿತಿ" ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು. ಇದಲ್ಲದೆ"ಕನಕ ಪುರಂದರ","ದ.ರಾ.ಬೇಂದ್ರೆ" ಹಾಗು "ಸೂಫಿ ಪಂಥ" ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದರು. ಪರಿಸರ ವಿನಾಶ ಕುರಿತು "ಚೆಲುವಿ" ಕಿರಚಿತ್ರವನ್ನು ನಿರ್ದೇಶಿಸಿದರು. ೨೦೦೭ ರಲ್ಲಿ ತೆರೆ ಕಂಡ ‘ಆ ದಿನಗಳು’ ಚಿತ್ರಕ್ಕೆ ಅಗ್ನಿ ಶ್ರೀಧರ್ ಅವರ ಜೊತೆದಗೂಡಿ ಚಿತ್ರಕಥೆಯನ್ನು ಬರೆದಿದ್ದಾರೆ. ಗೌರವ,ಪ್ರಶಸ್ತಿ : ಕರ್ನಾಟಕ ವಿಶ್ವವಿದ್ಯಾಲಯ ಕಾರ್ನಾಡರ ಸಾಹಿತ್ಯ-ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. "ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ. ಒಂದು ಸಮಸ್ಯೆಯನ್ನು ನಾಟಕ ರೂಪಕ್ಕೆ ಒಗ್ಗಿಸಿಕೊಂಡು ಅದಕ್ಕೊಂದು structure ಕೊಟ್ಟು ಜನರ ಮುಂದಿಡುವುದರಲ್ಲೇ ನಾಟಕಕಾರನ ಯಶಸ್ಸು, ಸೋಲು ಎರಡೂ ಅಡಗಿದೆ." ಎಂದು ಕಾರ್ನಾಡರ ನಾಟಕಗಳ ವಸ್ತು, ಗ್ರಹಿಕೆ ಬಗ್ಗೆ ಭಾರತೀಯ ರಂಗಭೂಮಿಯ ಹಿರಿಯ ನಿರ್ದೇಶಕ ಬಿ. ವಿ. ಕಾರಂತರು ದಾಖಲಿಸುತ್ತಾರೆ. ಕಾರ್ನಾಡರಿಗೆ ಹಲವಾರು ಹುದ್ದೆಗಳು, ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿಗಳ ಗೌರವ ದೊರೆಕಿದೆ. ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನೆಹರು ಸೆಂಟರ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ